ಬೆಂಗಳೂರು: ಖಾದಿ ಸಂಘ - ಸಂಸ್ಥೆಗಳನ್ನು ಪುನಶ್ಚೇತನಗೊಳಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸನ್ನು ಸಾಕಾರಗೊಳಿಸಲು ಅಕ್ಟೋಬರ್ 2 ರಂದು ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ನಷ್ಟದಲ್ಲಿರುವ ಖಾದಿ ಸಂಘ - ಸಂಸ್ಥೆಗಳಿಗೆ ಉತ್ತೇಜನ ನೀಡುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅವರು ಮನವಿ ಮಾಡಿದ್ದಾರೆ.
ಈ ಸಂಬಂಧ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳಿಗೆ ಸಚಿವ ಎಂಟಿಬಿ ನಾಗರಾಜ್ ಪತ್ರ ಬರೆದು ಕೋರಿದ್ದಾರೆ. ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ ಮತ್ತು ಸ್ವಾವಲಂಬಿ ಗ್ರಾಮ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸ್ಥಾಪಿಸಲಾಗಿದೆಯಾದರೂ ಅದು ಲಾಭದಾಯಕವಾಗಿಲ್ಲ.