ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಉಸ್ತುವಾರಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ನೇಮಕಗೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣಾ ಉಸ್ತುವಾರಿಗಳಾಗಿ ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಕಾರ್ಯ ನಿರ್ವಹಿಸಲಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣಾ ಉಸ್ತುವಾರಿಗಳಾಗಿ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ಅಭಯ್ ಪಾಟೀಲ್ ನೇಮಕವಾಗಿದ್ದಾರೆ.