ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಅವಿರೋಧ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ತಿಗೆ ಮುನಿರಾಜು ಗೌಡ ಅವಿರೋಧ ಆಯ್ಕೆ - Muniraju Gowda unanimously elected
ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ನಿಗದಿಯಾಗಿತ್ತು. ಆದರೆ, ಚುನಾವಣಾ ಕಣದಲ್ಲಿ ಅಂತಿಮವಾಗಿ ತುಳಸಿ ಮುನಿರಾಜು ಗೌಡ ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ.
ಧರ್ಮೇಗೌಡರ ನಿಧನದಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿತ್ತು. ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ನಿಗದಿಯಾಗಿತ್ತು. ಆದರೆ, ಚುನಾವಣಾ ಕಣದಲ್ಲಿ ಅಂತಿಮವಾಗಿ ತುಳಸಿ ಮುನಿರಾಜು ಗೌಡ ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಘೋಷಿಸಲಾಗಿದೆ.
ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ತುಳಸಿ ಮುನಿರಾಜು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಿದರು. ವಿಧಾನಪರಿಷತ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ತುಳಸಿ ಮುನಿರಾಜುಗೆ ವಿಶಾಲಾಕ್ಷಿ ಅವರು ಪ್ರಮಾಣಪತ್ರ ನೀಡಿದರು.