ಬೆಂಗಳೂರು: ಇಲ್ಲಿನ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ವಿಶಾಖಪಟ್ಟಣದಲ್ಲಿ ಬಂಧಿಸಿದ್ದಾರೆ.
ಆಟೋ ಚಾಲಕನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್ - ಅನೈತಿಕ ಸಂಬಂಧ ಹಿನ್ನೆಲೆ ಕೊಲೆ
ಇಲ್ಲಿನ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ವಿಶಾಖಪಟ್ಟಣದಲ್ಲಿ ಬಂಧಿಸಿದ್ದಾರೆ.
ಆರೋಪಿ ವಿಜಯವಾಡ ಮೂಲದ ರಾಜು
ಆಂಧ್ರ ಪ್ರದೇಶದ ವಿಜಯವಾಡ ಮೂಲದ ರಾಜು ಬಂಧಿತ ಆರೋಪಿ. ಫೆ. 26ರಂದು ಪ್ರಯಾಣಿಕನ ಸೋಗಿನಲ್ಲಿ ಆಟೋ ಚಾಲಕನನ್ನು ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಈತನನ್ನು ವಿಶಾಖಪಟ್ಟಣದಲ್ಲಿ ಬಂಧಿಸಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆಟೋ ಚಾಲಕನ ಹೆಂಡತಿ ಹಾಗೂ ಆರೋಪಿಯ ಸಹಚರ ನಾರಾಯಣ್ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಅನೈತಿಕ ಸಂಬಂಧಕ್ಕೆ ಆಕೆಯ ಗಂಡ ಅಡ್ಡಿಯಾಗುತ್ತಾನೆ ಅಂತಾ ಕೊಲೆಗೆ ನಾರಾಯಣ್ ಸಂಚು ರೂಪಿಸಿದ್ದ ಎನ್ನಲಾಗಿದೆ.