ಬೆಂಗಳೂರು: ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಬಿಎಸ್ ನಗರದಲ್ಲಿ ನಡೆದಿದೆ.
ಜೈಲಿನಿಂದ ಬಿಡುಗಡೆಯಾಗಿದ್ದ ಪಾಗಲ್ ಸೀನನ ಬರ್ಬರ ಹತ್ಯೆ... ಬೆಚ್ಚಿಬಿದ್ದ ಬೆಂಗಳೂರು - Bangalore crime news
ಹೆಚ್ಎಎಲ್ ನ ಎಲ್ಬಿಎಸ್ ನಗರದ ಬಾಡಿಗೆ ಮನೆಯಲ್ಲಿದ್ದ ಪಾಗಲ್ ಸೀನ ಇತ್ತಿಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಅರವಿಂದ್ ಅಲಿಯಾಸ್ ಪಾಗಲ್ ಸೀನ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹೆಚ್ಎಎಲ್ ನ ಎಲ್ಬಿಎಸ್ ನಗರದ ಬಾಡಿಗೆ ಮನೆಯಲ್ಲಿ ಪಾಗಲ್ ಸೀನ ವಾಸವಿದ್ದ. ಪ್ರಕರಣವೊಂದರಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ತಡರಾತ್ರಿ ಬಾಡಿಗೆ ಮನೆಗೆ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಯಾವ ಉದ್ದೇಶದಿಂದ ಕೊಲೆ ಮಾಡಿದ್ದಾರೆ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.