ಬೆಂಗಳೂರು: ದುಷ್ಕರ್ಮಿಗಳ ತಂಡಯುವಕನೊಬ್ಬನ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಕಮಲಾನಗರದ ಶಂಕರ್ ನಾಗ ಬಸ್ ನಿಲ್ದಾಣದ ಬಳಿ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಹಾಡುಹಗಲೇ ಕೊಲೆ,ಚಾಕು ಇರಿದು ಹಂತಕರು ಪರಾರಿ - Kannada news paper
ಸ್ಕೂಟರ್‌ನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ, ಯುವಕನನ್ನು ಹಿಂಬಾಲಿಸಿಕೊಂಡು ಬಂದ ಹಂತಕರ ತಂಡ ಚಾಕುವಿನಿಂದ ಕುತ್ತಿಗೆ ಇರಿದು ಪರಾರಿಯಾಗಿದೆ.
ಹಾಡು ಹಗಲೇ ಯುವನೊರ್ವನ ಕತ್ತಿಗೆ ಚಾಕು ಹಾಕಿ ಹತ್ಯೆ
ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಹಿತೇಶ್ ಎಂಬ ಯುವಕ ಸ್ಕೂಟರ್‌ನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದ ಎನ್ನಲಾಗಿದೆ. ಈ ವೇಳೆ ಯುವಕನನ್ನು ಹಿಂಬಾಲಿಸಿಕೊಂಡು ಬಂದ ಹಂತಕರ ತಂಡ, ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದೆ.
ಈ ಕುರಿತು ಸ್ಥಳ ಪರಿಶೀಲನೆ ನಡೆಸಿದ ಬಸವೇಶ್ವರ ನಗರ ಪೊಲೀಸರು ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸುತ್ತಮುತ್ತ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.