ಬೆಂಗಳೂರು:ಲಗೇಜ್ ಆಟೋ ಚಾಲಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಲ್ಲಿ ಆಟೋ ಚಾಲಕನನ್ನ ಕೊಂದ ದುಷ್ಕರ್ಮಿಗಳು - ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ಕೊಲೆ
ಹಳೇ ದ್ವೇಷದ ಹಿನ್ನೆಲೆ ಲಗೇಜ್ ಆಟೋ ಚಾಲಕನನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ
ಲಗ್ಗೆರೆ ನಿವಾಸಿ ರಘು(28) ವರ್ಷ ಕೊಲೆಯಾದ ಆಟೋ ಚಾಲಕ. ರಘು ರಾತ್ರಿ ಲಗ್ಗೆರೆ ಬಳಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಕುಳಿತಿರುವಾಗ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು, ರಘುನನ್ನು ಕಾರಿನಿಂದ ಹೊರಗೆಳೆದು ಚಾಕುವಿನಿಂದ ಮನಬಂದಂತೆ ಇರಿದು ಕೊಲೆಗೈದಿದ್ದಾರೆ.
ಡಿಸಿಪಿ ಶಶಿಕುಮಾರ್ ಪ್ರತಿಕ್ರಿಯೆ
ತಕ್ಷಣ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ವಿಚಾರ ತಿಳಿದ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಹಳೇ ದ್ವೇಷದ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ದುಷ್ಕರ್ಮಿಗಳಿಗಾಗಿ ಹುಡುಕಾಟ ಮುಂದುವರೆದಿದೆ.