ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿಕ್ಷಣೆ ಸಂಸ್ಥೆಯಲ್ಲಿನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಾ.ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಚಿತ್ರದುರ್ಗದ ಜಗದ್ಗುರು ಮುರುಗ ರಾಜೇಂದ್ರ ಬೃಹನ್ಮಠ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನ್ಯಾ.ಜೆ.ಎಂ.ಖಾಝಿ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಮೈಸೂರು ಜಿಲ್ಲಾ ಮಕ್ಕಳ ರಕ್ಷಣ ಘಟಕದ ಕಾನೂನು ಅಧಿಕಾರಿ ಚಂದ್ರಕುಮಾರ್ ಮತ್ತು ಇಬ್ಬರು ಅಪ್ರಾಪ್ತ ಸಂತ್ರಸ್ತ ಹೆಣ್ಣು ಮಕ್ಕಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
2022ರ ಆಗಸ್ಟ್ 26ರಂದು ಶ್ರೀಮುರುಘರಾಜೇಂದ್ರ ಬೃಹನ್ಮಠದ ಅಕ್ಕ ಮಹಾದೇವಿ ಹಾಸ್ಟೆಲ್ನಿಂದ ಇಬ್ಬರು ಮಕ್ಕಳು ಕಾಣೆಯಾಗಿದ್ದರು. ಈ ಸಂಬಂಧ ಹಾಸ್ಟೆಲ್ನ ವಾರ್ಡನ್ ರಶ್ಮಿ ಎಂಬುವರು ಮಠದ ಆಡಳಿತಾಧಿಕಾರಿ ಬಸವರಾಜು ಮತ್ತವರ ಪತ್ನಿ ವಿರುದ್ಧ ದೂರು ಸಲ್ಲಿಸಿದ್ದರು.
ಇದೇ ಕಾರಣದಿಂದ ಬಸವರಾಜು ಮತ್ತುವರ ಪತ್ನಿಯ ಪ್ರೇರಣೆಯಿಂದಾಗಿ ದೂರು ದಾಖಲಿಸಲಾಗಿದೆ. ಜೊತೆಗೆ, ಸಂತ್ರಸ್ತರಲ್ಲಿ ಒಬ್ಬರು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರೆ, ಮತ್ತೊಬ್ಬರು ನಿರಾಕರಿಸಿದ್ದಾರೆ. ಅರ್ಜಿದಾರರು ಪೊಲೀಸರಿಗೆ ಶರಣಾಗಿದ್ದಾರೆ. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಅರ್ಜಿದಾರರ ವಿರುದ್ಧ ವಿಚಾರಣೆ ಬಹುತೇಕ ಮುಕ್ತಾಯವಾಗಿದ್ದು, ಮತ್ತೂ ಜೈಲಿನಲ್ಲಿಡುವುದರಿಂದ ಅವರ ಹಕ್ಕು ಮೊಡಕುಗೊಳಿಸದಂತಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದರು.
ಇದನ್ನೂ ಓದಿ:ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲು