ಬೆಂಗಳೂರು:ಮುರುಘಾ ಮಠದ ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ರಾಜ್ಯ ಸರಕಾರದ ಕಂದಾಯ ಇಲಾಖೆಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ.
ಶಿವಮೂರ್ತಿ ಮುರುಘರು ಜೈಲು ಸೇರಿದ ಮೇಲೆ ಮಠದ ಆಡಳಿತ ಸರಿಯಾಗಿ ನಡೆಯುತ್ತಿಲ್ಲ. ಮಠಕ್ಕೆ ಸೇರಿದ ಹಲವು ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಸಮರ್ಪಕವಾಗಿ ನಡೆಸಲು ಸರಕಾರದಿಂದ ಆಡಳಿತಾಧಿಕಾರಿ ನೇಮಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಡಾ.ಮಧು ಅರ್ಜಿ ಸಲ್ಲಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಮಠದ ಆಡಳಿತ ಮತ್ತು ಕಾರ್ಯನಿರ್ವಹಣೆ ಬಗ್ಗೆ ವರದಿ ಸಲ್ಲಿಸಲು ಆದೇಶಿಸಿದ್ದರು.