ಬೆಂಗಳೂರು:ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿರುವ ಶ್ರೀರಾಮ ಸೇನೆಯ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ನಾಲ್ಕು ಅಂಶಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರ ನೀಡಿದೆ.
ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ. ಇನ್ನೊಂದು ತಿಂಗಳೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್ಡಿಪಿಐ, ಪಿಎಫ್ಐ ಹಾಗೂ ಸಿಎಫ್ಐ ಸಂಘಟನೆಗಳಿಂದ ಎರಡು ವರ್ಷಗಳಿಂದ ಮೃತ ಹರ್ಷನಿಗೆ ಜೀವ ಬೆದರಿಕೆ ಇದ್ದರೂ ಸಹ ಸರ್ಕಾರ ರಕ್ಷಣೆ ನೀಡದಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.