ಬೆಂಗಳೂರು: ಮಾಜಿ ಭೂಗತ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ರೂವಾರಿ ಕ್ಯಾನ್ಸರ್ನಿಂದ ಬಳಲುತ್ತಿರುವ ಮುತ್ತಪ್ಪ ರೈ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಡಾನ್ ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ - ಮುತ್ತಪ್ಪ ರೈ
ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಮುತ್ತಪ್ಪ ರೈ, ಎರಡು ದಿನಗಳ ಹಿಂದೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ರೈ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದೆ. ಆರೋಗ್ಯ ಸ್ಥಿತಿಯ ಕುರಿತು ಆಸ್ಪತ್ರೆ ವತಿಯಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.
ಮುತ್ತಪ್ಪ ರೈ ಒಂದು ಕಾಲದಲ್ಲಿ ಭೂಗತ ದೊರೆಯಾಗಿದ್ದರು. ಕಾಲಕ್ರಮೇಣ ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.