ಬೆಂಗಳೂರು:ಜೆಡಿಎಸ್ ಪಕ್ಷಕ್ಕೆ ಹೊಸ ಸಾರಥಿ ನೇಮಕ ಮಾಡುವ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಪರೋಕ್ಷವಾಗಿ ಮುನ್ಸೂಚನೆ ನೀಡಿದ್ದಾರೆ.
ಮೂರ್ನಾಲ್ಕು ದಿನಗಳಲ್ಲಿ ಹೊಸ ಸಾರಥಿ ನೇಮಕ: ಹೆಚ್ಡಿಡಿ - ವಿಶ್ವನಾಥ್
ಜೆ.ಪಿ.ಭವನದಲ್ಲಿ ಪರಾಜಿತ ಅಭ್ಯರ್ಥಿಗಳ ಜತೆಗಿನ ಸಭೆ ಬಳಿಕ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮೂರ್ನಾಲ್ಕು ದಿನಗಳಲ್ಲಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುತ್ತೇನೆ.
ಜೆ.ಪಿ.ಭವನದಲ್ಲಿ ಪರಾಜಿತ ಅಭ್ಯರ್ಥಿಗಳ ಜತೆಗಿನ ಸಭೆ ಬಳಿಕ ಮಾತನಾಡಿದ ಅವರು, ಮೂರ್ನಾಲ್ಕು ದಿನಗಳಲ್ಲಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುತ್ತೇನೆ. ವಿಶ್ವನಾಥ್ ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಆದರೆ, ವಿಶ್ವನಾಥ್ ಅವರಿಂದನೇ ಹೊಸ ಅಧ್ಯಕ್ಷರಿಗೆ ಬಾವುಟ ಕೊಡಿಸಿ ಅಧಿಕಾರ ಹಸ್ತಾಂತರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಿ ಎಂಬ ವಿಶ್ವನಾಥ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ಹೇಳಿಕೆ ತಪ್ಪಲ್ಲ. ಆದರೆ ಒಬ್ಬರಿಗೆ ಒಂದೇ ಹುದ್ದೆ ಅಂತ ಪಕ್ಷದಲ್ಲಿ ನಿರ್ಧಾರ ಆಗಿದೆ. ನಾನೇ ರಾಜೀನಾಮೆ ನೀಡಿ ಇಬ್ರಾಹಿಂಗೆ ಸ್ಥಾನ ಕೊಟ್ಟಿದ್ದೆ. ಹೀಗಾಗಿ ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂದು ತಿಳಿಸಿದರು.