ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ, ಉತ್ತಮ ಆಡಳಿತಕ್ಕೆ ಹೆಚ್ಚಿನ ಒತ್ತು: ಬೊಮ್ಮಾಯಿ ಇಂಗಿತ - Basavaraj bommai targets
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ನಂತರ ತಮ್ಮ ನಿವಾಸದ ಬಳಿ ಮಾದ್ಯಮದವರ ಬಳಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಯಾಗಿ ತಮ್ಮ ಸರಕಾರದ ಆಡಳಿತದಲ್ಲಿ ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎನ್ನುವುದನ್ನು ಹಂಚಿಕೊಂಡರು.
![ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ, ಉತ್ತಮ ಆಡಳಿತಕ್ಕೆ ಹೆಚ್ಚಿನ ಒತ್ತು: ಬೊಮ್ಮಾಯಿ ಇಂಗಿತ Bommai priority](https://etvbharatimages.akamaized.net/etvbharat/prod-images/768-512-12594291-428-12594291-1627425708521.jpg)
ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜತೆಗೆ ಉತ್ತಮ ಆಡಳಿತ , ಸಮಾಜದ ಎಲ್ಲ ವರ್ಗದವರಿಗೆ ನ್ಯಾಯ ದೊರಕಿಸಿಕೊಡುವುದು. ಹಿಂದಿನ ಯಡಿಯೂರಪ್ಪ ಸರಕಾರ ಬಜೆಟ್ನಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ತಮ್ಮ ಆಡಳಿತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ನಿಡಲಾಗುತ್ತದೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ .
ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಪದವಿ ತಮಗೆ ಬಯಸದೇ ಬಂದ ಭಾಗ್ಯವಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜನಪರ, ಉತ್ತಮ ಆಡಳಿತ ನೀಡಲು ಶ್ರಮಿಸಲಾಗುತ್ತದೆ. ಹಿರಿಯ ನಾಯಕರಾದ ಯಡಿಯೂರಪ್ಪನವರ ಜೊತೆ ಸಮಾಲೋಚಿಸಿ ಉತ್ತಮ ಕ್ಯಾಬಿನೆಟ್ ರಚಿಸಲಾಗುತ್ತದೆ. ಸದ್ಯದಲ್ಲಿಯೇ ರಚನಾತ್ಮಕ ಮಂತ್ರಿ ಮಂಡಲಕ್ಕೆ ಕ್ರಿಯಾಶೀಲ ಶಾಸಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ನಿಯೋಜಿತ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
Last Updated : Jul 28, 2021, 7:01 AM IST