ಬೆಂಗಳೂರು: ಅಸ್ವಸ್ಥಗೊಂಡು ನಗರದ ಆಸ್ಟರ್ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ತಾವು ಆರೋಗ್ಯವಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ.
ನನ್ನ ಆರೋಗ್ಯ ಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ಗಳು ಸಹಜವಾಗಿವೆ.