ಬೆಂಗಳೂರು:ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದರೆ ನನ್ನ ಪ್ರಾಣ ಹೋದರು ಪರವಾಗಿಲ್ಲ, ಸ್ಥಳಾಂತರಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನನ್ನ ಪ್ರಾಣ ಹೋದ್ರೂ ಪರವಾಗಿಲ್ಲ, ಕನಕಪುರದಿಂದ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಡಲ್ಲ: ಡಿಕೆಶಿ - dks latest news
ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದರೆ ನನ್ನ ಪ್ರಾಣ ಹೋದರು ಪರವಾಗಿಲ್ಲ, ಸ್ಥಳಾಂತರಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ, ಮೆಡಿಕಲ್ ಕಾಲೇಜು ಮಾತ್ರ ಬಿಟ್ಟು ಕೊಡಲ್ಲ. ಕನಕಪುರದಲ್ಲೇ ಮೆಡಿಕಲ್ ಕಾಲೇಜು ಆಗಬೇಕು. ಈಗಾಗಲೇ ನಮ್ಮ ಸರ್ಕಾರದ ಅವಧಿಯಲ್ಲಿ ತೀರ್ಮಾನ ಆಗಿದೆ. ಆದರೆ ಯಡಿಯೂರಪ್ಪ ಅದನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಿದ್ದಾರೆ. ಯಡಿಯೂರಪ್ಪ ಧೋರಣೆ ಸರಿಯಿಲ್ಲ. ನಾನು ಈ ಬಗ್ಗೆ ಹೋರಾಟ ಮಾಡಲು ಸಿದ್ಧನಿದ್ದೇನೆ. ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಿದ್ರೆ ಹೋಗಲಿ. ಆದರೆ ಮೆಡಿಕಲ್ ಕಾಲೇಜನ್ನು ಮಾತ್ರ ಬಿಟ್ಟುಕೊಡುವುದಿಲ್ಲ. ಅದೇನು ಬೇಕಾದರು ಆಗಲಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಯಡಿಯೂರಪ್ಪ ನನ್ನ ಮನೆ ಬಾಗಿಲಿಗೆ ಬಂದಾಗ ಯಾವುದೇ ರಾಜಕೀಯ ಮಾಡದೇ ನೂರಾರು ಕೋಟಿ ಯೋಜನೆಗಳಿಗೆ ಅನುಮೋದನೆ ಕೊಟ್ಟಿದ್ದೇನೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಿಎಂ ಬಿಎಸ್ವೈ ವಿರುದ್ಧ ಆಕ್ರೋಶ ಹೊರಹಾಕಿದರು.