ಬೆಂಗಳೂರು: ರಾಜೀನಾಮೆ ನನ್ನ ಸ್ವಂತ ನಿರ್ಧಾರವಾಗಿದ್ದು, ಈ ಬಗ್ಗೆ ಎರಡು ತಿಂಗಳ ಹಿಂದೆಯೇ ನಿರ್ಧರಿಸಿದ್ದೆ ಎಂದು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜಭವನದ ಬಳಿ ಮಾತನಾಡಿದ ಅವರು, ದೆಹಲಿಯಿಂದ ನನಗೆ ಯಾವುದೇ ಒತ್ತಡ ಬಂದಿಲ್ಲ. ರಾಜೀನಾಮೆ ನನ್ನ ಸ್ವಂತ ನಿರ್ಧಾರ ಎಂದು ಸ್ಪಷ್ಟಪಡಿಸಿದ್ದಾರೆ. ನನ್ನ ಮೇಲೆ ಅಭಿಮಾನವಿಟ್ಟು ಎರಡು ವರ್ಷ ರಾಜ್ಯದಲ್ಲಿ ಆಡಳಿತ ನಡೆಸಲು ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ನನಗೆ ಅವಕಾಶ ಮಾಡಿಕೊಟ್ಟರು. ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.