ಬೆಂಗಳೂರು: ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನ ನೀಡಿದೆ.
ನಿನ್ನೆ ಸಚಿವ ಸಂಪುಟ ಸಭೆ ಮುಗಿಸಿ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಜಿಲ್ಲಾಡಳಿತದ ಪರವಾಗಿ ಪಂಚಲಿಂಗ ದರ್ಶನಕ್ಕಾಗಿ ಆಗಮಿಸುವಂತೆ ಆಹ್ವಾನಿಸಿದರು.