ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು-ಮೈಸೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶೇಷ ರೈಲಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.25 ಕ್ಕೆ ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ರೈಲು ಸಂಜೆ 5.20ಕ್ಕೆ ಎಂಜಿಆರ್ ಚೆನ್ನೈ ಸೆಂಟ್ರಲ್ ಸ್ಟೇಷನ್ ತಲುಪಲಿದೆ.
16 ಕೋಚ್ಗಳ ವಂದೇ ಭಾರತ್ ರೈಲು ಬೆಂಗಳೂರು ಕಂಟೋನ್ಮೆಂಟ್, ಬೈಯ್ಯಪ್ಪನ ಹಳ್ಳಿ, ಕೆ.ಆರ್.ಪುರಂ, ವೈಟ್ ಫೀಲ್ಡ್, ದೇವನಗೊಂದಿ, ಮಾಲೂರು, ತ್ಯಾಕಲ್, ಬಂಗಾರಪೇಟೆ, ವರದಪುರ, ಬಿಸನತ್ತಂ, ಕುಪ್ಪಂ, ಮುಲನೂರ್, ಸೋಮನಾಯಕ್ಕನ್ ಪಟ್ಟಿ, ಜೋಲಾರ್ ಪೇಟ್ ಜಂಕ್ಷನ್ ಸೇರಿದಂತೆ 40 ರೈಲು ನಿಲ್ದಾಣಗಳಲ್ಲಿ ಸ್ಟಾಪ್ ತೆಗೆದುಕೊಳ್ಳಲಿದೆ.
ಇದನ್ನೂ ಓದಿ:ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಟ್ರಯಲ್ ರನ್: 6.5 ಗಂಟೆಯಲ್ಲಿ 504 ಕಿ.ಮೀ ಸಂಚಾರ