ಕರ್ನಾಟಕ

karnataka

ETV Bharat / state

ಕೊರೊನಾ ರೂಪಾಂತರಿ ತಳಿ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಕೊಡಗು ಜಿಲ್ಲಾಡಳಿತಕ್ಕೆ ಸಚಿವ ಭೋಸರಾಜು ಸೂಚನೆ

ಕೊಡಗಿನಲ್ಲಿ ಕೊರೊನಾ ರೂಪಾಂತರಿ ತಳಿ ಪತ್ತೆಯಾಗಿದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಎನ್.ಎಸ್.ಭೋಸರಾಜು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಎನ್​ ಎಸ್‌ ಭೋಸರಾಜು
ಎನ್​ ಎಸ್‌ ಭೋಸರಾಜು

By ETV Bharat Karnataka Team

Published : Dec 17, 2023, 5:20 PM IST

ಬೆಂಗಳೂರು: ಕೇರಳದಲ್ಲಿ ಕೊರೊನಾ ರೂಪಾಂತರಿ ಜೆಎನ್‌1 ಪತ್ತೆಯಾಗಿದ್ದು ಗಡಿ ಜಿಲ್ಲೆ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎನ್‌.ಎಸ್‌.ಭೋಸರಾಜು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಇಂದು ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಜಿಲ್ಲೆಯ ಆರೋಗ್ಯ ಇಲಾಖೆ ಸನ್ನದ್ದವಾಗಿದ್ದುಕೊಂಡು ಎಲ್ಲಾ ರೀತಿಯ ಪರಿಸ್ಥಿತಿಗಳನ್ನು ನಿಭಾಯಿಸಲು ಸಜ್ಜಾಗಿರಬೇಕು. ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೊರೊನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಅಗತ್ಯ ಚಿಕಿತ್ಸೆಗೆ ಕ್ರಮಗಳನ್ನು ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಹೀಗಾಗಿ ಈಗಿನಿಂದಲೇ ಅಗತ್ಯ ವ್ಯವಸ್ಥೆಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ:ಮತ್ತೆ ಕೋವಿಡ್ ಅಲರ್ಟ್; ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್, ಮಂಗಳವಾರ ಟಿಎಸಿ ಸಭೆ - ಸಚಿವ ಗುಂಡೂರಾವ್

ABOUT THE AUTHOR

...view details