ಬೆಂಗಳೂರು:ಮೈತ್ರಿ ಸರ್ಕಾರದ ಅವಧಿಯಲ್ಲಿ ಆದ ನೆರೆ ಅನುದಾನ ಈಗ ಬಿಡುಗಡೆ ಆಗಿದೆ. ಕುಮಾರಸ್ವಾಮಿ ಅವ್ರಿಗೆ ಅನುದಾನ ಕೊಟ್ಟಿಲ್ಲ ಅದನ್ನ ಈಗ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ನಾಡಗೌಡ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ನಾಡಗೌಡ ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಇಂದು ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ನಾಡಗೌಡ, ರಾಜ್ಯದಲ್ಲಿ ನೆರೆ ಉಂಟಾಗಿ ಸಾಕಷ್ಟು ಹಾನಿಯಾಗಿದೆ. ರೈತರ ಬದುಕು ನಾಶವಾಗಿದೆ. ಹೀಗಾಗಿ ದೇವೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯುತ್ತೇವೆ ಎಂದರು.
ಕಳೆದ ಎರಡು ದಿನಗಳ ಹಿಂದೆ ಕೇಂದ್ರ ನೀಡಿರುವ 1,200 ಕೋಟಿ ರೂ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ಕೊಡಗಿನಲ್ಲಿ ಉಂಟಾಗಿದ ನೆರೆ ಪರಿಹಾರದ ಹಣವಾಗಿದೆ. ಈಗ ನಮ್ಮ ಉತ್ತರ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಎಂದರು.
ಯತ್ನಾಳ್ ಅವರ ಹೇಳಿಕೆ ನೋಡಿದ್ರೆ ಸರ್ಕಾರದಲ್ಲಿ ಏನೇನ್ ಆಗ್ತಿದೆ ಅಂತ ಗೊತ್ತಾಗ್ತಿದೆ. ರೈತರ ಪರ ಮಾತಾಡಿದ್ರೆ ಶೋಕಾಸ್ ನೋಟಿಸ್ ಕೊಡ್ತಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಎರಡೂ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಈಗ ನಮ್ಮ ಉತ್ತರ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ. ಅಲ್ಲದೇ ನಮ್ಮ ಸರ್ಕಾರದಲ್ಲಿ ನಡೆದ ಕೆಲಸ ನಿಲ್ಲಿಸಿದ್ದಾರೆ. ನನ್ನ ಕ್ಷೇತ್ರಕ್ಕೆ ಅನುದಾನ ನಿಲ್ಲಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಮ್ಯಾನೇಜ್ ಮಾಡೋಕೆ ಆಗ್ದೇ ದಿಕ್ಕು ತಪ್ಪಿದ್ದಾರೆ. ಆ ಹಣವನ್ನ ಯಾರಿಗೆ ಕೊಟ್ಟಿದ್ದಾರೆ, ಎಲ್ಲಿಗೆ ಹೋಗ್ತಿದೆ ಅನ್ನೋ ಮಾಹಿತಿಯೇ ಇಲ್ಲ . ಇದರ ವಿರುದ್ಧ ಸದನದಲ್ಲಿ ಮಾತನಾಡುತ್ತೇನೆ ಎಂದರು. ಅಲ್ಲದೇ ಸದನದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ನಾಡಗೌಡ, ಸದನದಲ್ಲಿ ಫೇಸ್ ಮಾಡೋಕೆ ಆಗಲ್ಲ ಅನ್ನೋದು ಅವ್ರಿಗೆ ಅರ್ಥ ಆಗಿದೆ. ಹೀಗಾಗಿಯೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದಾರೆ ಎಂದರು.