ಕರ್ನಾಟಕ

karnataka

ETV Bharat / state

ಸಚಿವ ಸ್ಥಾನ ಕಳೆದುಕೊಂಡ ನಾಗೇಶ್​ಗೆ ಗಿಫ್ಟ್​: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದ ಸಿಎಂ! - ಕರ್ನಾಟಕ ಅಬಕಾರಿ ಸಚಿವ ನಾಗೇಶ್​

ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಾಗೇಶ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರ್ಜಗಿ ಗಿಫ್ಟ್ ನೀಡಿದ್ದಾರೆ.

Nagesh
Nagesh

By

Published : Jan 13, 2021, 8:08 PM IST

ಬೆಂಗಳೂರು:ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಗೇಶ್​ ಅವರನ್ನ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.

ಹೆಚ್​.ನಾಗೇಶ್ ಇಂದು ಸ್ವ-ಇಚ್ಛೆಯಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದು, ಇದರ ಬೆನ್ನಲ್ಲೇ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದರ ಜತೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದಿಸಿದ್ದಾರೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ಓದಿ: ಸಂಪುಟದಿಂದ ಕೋಕ್ ಆತಂಕ: ಸಿಎಂ ನಿವಾಸಕ್ಕೆ‌ ದೌಡಾಯಿಸಿದ ಸಚಿವ ನಾಗೇಶ್

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಮುನಿಕೃಷ್ಣ ಅವರನ್ನು ಮಾರುಕಟ್ಟೆ ಕಮ್ಯುನಿಕೇಷನ್ & ಅಡ್ವರ್ಟೈಸಿಂಗ್ ಲಿಮಿಟೆಡ್​ನ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದಿಸಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.

ಒಂದು ವರ್ಷದಿಂದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ ಇದೀಗ ಸಚಿವ ಸ್ಥಾನ ಕಳೆದುಕೊಂಡು ನಿಗಮ ಸ್ಥಾನ ಪಡೆದುಕೊಂಡಿದ್ದಾರೆ. ‌ಅಸಮಾಧಾನದ ನಡುವೆಯೂ ಈ ಸ್ಥಾನಮಾನವನ್ನು ಸ್ವೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details