ಕರ್ನಾಟಕ

karnataka

ETV Bharat / state

ಎಲ್ಲರ ಚಿತ್ತ ಚುನಾವಣಾ ಫಲಿತಾಂಶದತ್ತ: ಕಟೀಲ್​ ಚಿತ್ತ ಸಂಘಟನಾ ಚಟುವಟಿಕೆಯತ್ತ! - naleen kumar kateel

ಬಿಜೆಪಿ‌ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂಘಟನೆಗೆ ಬಹಳ ಪ್ರಾಮುಖ್ಯ ತೋರಿದ್ದಾರೆ. ಈ ಹಿನ್ನೆಲೆ ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ನಿರಂತರವಾಗಿ ಸಭೆ ನಡೆಸಿದ್ದಾರೆ.

Nalin kumar holds meeting with BJP activist
ಕಟೀಲ್​ ಚಿತ್ತ ಸಂಘಟನಾ ಚಟುವಟಿಕೆಯತ್ತ ಕಟೀಲ್​ ಚಿತ್ತ ಸಂಘಟನಾ ಚಟುವಟಿಕೆಯತ್ತ!

By

Published : Nov 9, 2020, 11:57 PM IST

ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದ್ದರೆ ಬಿಜೆಪಿ‌ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತ್ರ ಸಂಘಟನಾ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.

ತುಮಕೂರು ಸಭೆ ಮುಗಿಸಿ ನಂತರ ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ್ದಾರೆ. ಕಟೀಲ್​ ಅವರು ಬೆಂಗಳೂರಿನಲ್ಲಿ ಬೆಂಗಳೂರು ಮಹಾನಗರದ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಜೊತೆ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಿದ್ದಾರೆ.

ನಂತರ ಬೆಂಗಳೂರು ಉತ್ತರದ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಸಿದ ಅವರು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸಚಿವ ಗೋಪಾಲಯ್ಯ, ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಪಕ್ಷದ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಸಂಜೆ ಬೆಂಗಳೂರು ದಕ್ಷಿಣದ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಸಿದರು.

ನಂತರ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಬೆಂಗಳೂರು ದಕ್ಷಿಣದ ಜಿಲ್ಲಾಧ್ಯಕ್ಷ ಎನ್.‌ ಆರ್.‌ ರಮೇಶ್‌ ಮತ್ತು ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಇಡೀ ದಿನ ನಿರಂತರವಾಗಿ ಬೆಂಗಳೂರು ವ್ಯಾಪ್ತಿಗೆ ಸೀಮಿತವಾಗಿ ಪಕ್ಷ ಸಂಘಟನೆ ಕುರಿತು ಮಹತ್ವದ ಸಭೆಗಳನ್ನು ನಡೆಸಿದರು. ಪಕ್ಷ ಬಲವರ್ಧನೆ, ಬೂತ್ ಮಟ್ಟದಲ್ಲಿ ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ABOUT THE AUTHOR

...view details