ಬೆಂಗಳೂರು:ನೂತನ ಪದಾಧಿಕಾರಿಗಳ ನೇಮಕವಾದ ಬೆನ್ನಲ್ಲೇ ಹೊಸ ತಂಡದ ಜೊತೆಯಲ್ಲಿ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲ ಸಭೆ ನಡೆಸಿದರು.
ನೂತನ ಪದಾಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದ ನಳಿನ್ ಕುಮಾರ್ ಕಟೀಲ್ - ಬಿಜೆಪಿ ರಾಜ್ಯಾಧ್ಯಕ್ಷ
ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನೂತನವಾಗಿ ಆಯ್ಕೆಯಾದ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಪಕ್ಷ ಸಂಘಟನೆ, ಜವಾಬ್ದಾರಿ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಿದರು.
ನಳಿನ್ ಕುಮಾರ್ ಕಟೀಲ್ ಸಭೆ
ರಾಜ್ಯ ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನೂತನವಾಗಿ ಆಯ್ಕೆಯಾದ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಪಕ್ಷ ಸಘಟನೆ, ಜವಾಬ್ದಾರಿ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಿದರು.
ರಾಜ್ಯ ಪದಾಧಿಕಾರಿಗಳ ಪ್ರಥಮ ಸಭೆ ನಂತರ ರಾಜ್ಯ ಅಧ್ಯಕ್ಷರು ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ವಿವಿಧ ಮೋರ್ಚಾಗಳ ರಾಜ್ಯ ಅಧ್ಯಕ್ಷರು ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.