ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್.ಐ.ಎ ತನಿಖೆಗೆ ವಹಿಸಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧನ್ಯವಾದ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರು, ರಾಜ್ಯದಲ್ಲಿ ಎನ್.ಐ.ಎಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಎನ್.ಐ.ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಭೇಟಿ ಬಳಿಕ ಕಟೀಲ್ ತಿಳಿಸಿದರು.
ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್ - Etv Bharat Kannada
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್.ಐ.ಎಗೆ ವಹಿಸಿರುವುದಕ್ಕೆ ಧನ್ಯವಾದ ತಿಳಿಸಿದರು.
Etv Bhಅಮಿತ್ ಶಾ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್arat