ಬೆಂಗಳೂರು:ಬಿಬಿಎಂಪಿ ಮೇಯರ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲು ಯಾವುದೇ ಸಮಿತಿ ರಚನೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.
ಸಿಎಂ, ಕಟೀಲ್ ದ್ವಂದ್ವ ನಿಲುವು: ಪಕ್ಷದಲ್ಲಿ ಸಮನ್ವಯತೆ ಇಲ್ಲದಂತಾಗಿದೆಯಾ? - ಮೇಯರ್ ಅಭ್ಯರ್ಥಿ ಆಯ್ಕೆ ಸಮಿತಿ ರಚನೆ
ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರ ಸಂಬಂಧ ಸಿಎಂ ಸಮಿತಿ ರಚನೆ ಮಾಡಿದ್ದು ಇದನ್ನು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದರು. ಆದರೆ, ಪಕ್ಷದ ವತಿಯಿಂದ ಯಾವುದೇ ಸಮಿತಿ ರಚನೆ ಮಾಡಿಲ್ಲ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.
ಬಿಬಿಎಂಪಿ ಮೇಯರ್ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರಲ್ಲೇ ಗೊಂದಲ ಇರುವುದು ಬಹಿರಂಗಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ನಡುವೆ ಗೊಂದಲ ಇರುವುದನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಿಂದ ಸ್ಪಷ್ಟವಾಗಿದೆ.
ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರ ಸಂಬಂಧ ಸಿಎಂ ಸಮಿತಿ ರಚನೆ ಮಾಡಿದ್ದು, ಇದನ್ನು ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದರು. ಆದರೆ, ಪಕ್ಷದ ವತಿಯಿಂದ ಯಾವುದೇ ಸಮಿತಿ ರಚನೆ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ. ಸಿಎಂ ಹಾಗೂ ರಾಜ್ಯಾಧ್ಯಕ್ಷರ ನಡುವಿನ ದ್ವಂದ್ವ ನಿಲುವು ಪಕ್ಷದಲ್ಲಿ ಸಮನ್ವಯ ಕೊರತೆ ಇರುವುದನ್ನು ಸಾಬೀತುಪಡಿಸಿದೆ ಎನ್ನಲಾಗುತ್ತಿದೆ.