ಕರ್ನಾಟಕ

karnataka

ETV Bharat / state

ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ: ನಳಿನ್ ಕುಮಾರ್ ಕಟೀಲ್ - ಬೆಂಗಳೂರು ಇತ್ತೀಚಿನ ಸುದ್ದಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್​ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

By

Published : Oct 21, 2020, 2:03 PM IST

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇನ್ನು ಆರ್.ಅಶೋಕ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ನಾಯಕತ್ವ ಬದಲಾವಣೆ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಟಾಂಗ್ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬಾಬೂರಾವ್ ದೇಶಪಾಂಡೆ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಈ ಬಗ್ಗೆ ಅಶೋಕ್‌ ಕುರ್ಚಿ ಖಾಲಿ ಇಲ್ಲ ಎಂದು ಚೆನ್ನಾಗಿ ಹೇಳಿದ್ದಾರೆ. ಇದನ್ನೇ ನಾನೂ ಹೇಳುತ್ತೇನೆ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ಯಾಕೆ ಈ ರೀತಿ ಮಾತನಾಡಿದ್ದಾರೆ ಎಂದು ಗೊತ್ತಿಲ್ಲ. ಈ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಅನುದಾನದ ಬಗ್ಗೆ ಯತ್ನಾಳ್ ಮಾತನಾಡಿದ್ದಾರೆ. ಅವರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಅಥವಾ ಕೊರತೆಯಾಗಿದೆ ಎಂಬುದರ ಬಗ್ಗೆ ಮಾತನಾಡಲು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಹೋಗಿ ಮಾತನಾಡಲಿ, ಚರ್ಚೆ ನಡೆಸಲಿ ಎಂದರು. ಯತ್ನಾಳ್ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಕಟೀಲ್, ಈ ಬಗ್ಗೆ ಅವರನ್ನೇ ಕೇಳಿ ಎಂದು ನಿರ್ಗಮಿಸಿದರು.

ABOUT THE AUTHOR

...view details