ಬೆಂಗಳೂರು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಕುರಿತ ಸುದ್ದಿ ಕೇವಲ ಊಹಾಪೋಹವಾಗಿದ್ದು, ಯಾವುದೇ ಕಾರಣಕ್ಕೂ ರೌಡಿ ಹಿನ್ನಲೆ ಹೊಂದಿರುವ ವ್ಯಕ್ತಿ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.
ಸೈಲೆಂಟ್ ಸುನೀಲ್ ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಆತ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲಾ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದರು.