ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಆರ್.ಎಸ್.ಎಸ್.ಕಚೇರಿ ಹಾಗೂ ಆದಿಚುಂಚನಗಿರಿ ಮಠಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದರು.
ಬಿಜೆಪಿ ಪದಾಧಿಕಾರಿಗಳ ಸಭೆ ಮುಗಿಯುತ್ತಿದ್ದಂತೆ ಆರ್. ಎಸ್. ಎಸ್ ಕಚೇರಿಗೆ ಭೇಟಿ ನೀಡಿದ ಅವರು, ಆರ್.ಎಸ್.ಎಸ್. ಅಧಿಕಾರಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದರು.
ನಂತರ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ರಾಜ್ಯಾಧ್ಯಕ್ಷರಿಗೆ ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಸಚಿವ ವಿ. ಸೋಮಣ್ಣ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಶಾಸಕ ಸಂಜೀವ ಮಠಂದೂರು ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಾನು ಆದಿಚುಂಚನಗಿರಿ ಮಠದ ಶಿಷ್ಯ. ಹಾಗಾಗಿ ಹತ್ತಾರು ವರ್ಷಗಳಿಂದ ಮಠಕ್ಕೆ ಬರುತ್ತಿದ್ದೇನೆ. ಇಂದು ಪದಗ್ರಹಣ ಆಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದಿದ್ದೇನೆ ಎಂದರು.