ಕರ್ನಾಟಕ

karnataka

ETV Bharat / state

ಮುಸುಕಿನ ಗುದ್ದಾಟಕ್ಕೆ ಸಿಎಂ ಮುನಿಸು: ಬಿಎಸ್​ವೈ ಭೇಟಿ ಮಾಡಿದ ಕಟೀಲ್​ - BJP political news

ಸಿಎಂ ನಿವಾಸ ಧವಳಗಿರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ, ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮುನಿಸಿಕೊಂಡಿರುವ ಸಿಎಂ ಯಡಿಯೂರಪ್ಪ ಮನವೊಲಿಕೆಗೆ ಕಟೀಲ್ ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

By

Published : Oct 3, 2019, 10:54 AM IST

ಬೆಂಗಳೂರು: ಪಕ್ಷ ಹಾಗು ಸರ್ಕಾರದ ನಡುವೆ ಸಮನ್ವಯತೆ ಇಲ್ಲ, ಸಿಎಂ ಹಾಗು ರಾಜ್ಯಾಧ್ಯಕ್ಷರ ನಡುವೆಯೂ ಹೊಂದಾಣಿಕೆ ಇಲ್ಲ ಎನ್ನುವ ಮಾತುಗಳು ಕೇಳಿಬಂದ ಬೆನ್ನಲ್ಲೇ ಸಿಎಂ ಬಿ. ಎಸ್. ಯಡಿಯೂರಪ್ಪ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ಪಕ್ಷದಲ್ಲಿನ ಕೆಲ ಬೆಳವಣಿಗೆಗಳಿಂದ ಮುನಿಸಿಕೊಂಡಿರುವ ಸಿಎಂ ಯಡಿಯೂರಪ್ಪ ಮನವೊಲಿಕೆಗೆ ಕಟೀಲ್ ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಸಿಎಂ ನಿವಾಸ ಧವಳಗಿರಿಗೆ ನಳಿನ್ ಕುಮಾರ್ ಕಟೀಲ್ ಭೇಟಿ

ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ, ಉಪಾಧ್ಯಕ್ಷ ಹುದ್ದೆಗಳಿಗೆ ಬಿಎಸ್​ವೈ ವಿರೋಧಿಗಳನ್ನು ನೇಮಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಮುನಿಸಿಕೊಂಡಿರುವ ಯಡಿಯೂರಪ್ಪ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಭೇಟಿ ಮಾಡಿ ಪರಿಸ್ಥಿತಿ ತಿಳಿಗೊಳಿಸುವ ಕಸರತ್ತಿಗೆ ಮುಂದಾಗಿದ್ದಾರೆ ಕಟೀಲ್​.

ಇತ್ತೀಚೆಗೆ ಭಾ‌ನುಪ್ರಕಾಶ್ ಮತ್ತು ನಿರ್ಮಲ್ ಕುಮಾರ್ ಸುರಾನಾರನ್ನು ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಿದ್ದರಿಂದ ಬೇಸರಗೊಂಡಿದ್ದ ಯಡಿಯೂರಪ್ಪ, ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದಲ್ಲಿನ ಬಿಎಸ್​ವೈ ಪರ ಕಾರ್ಯಕರ್ತರು ಮತ್ತು ಉಪಚುನಾವಣೆಗಳ ಸಲುವಾಗಿ ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ಪಡೆಯಲು ನಳಿನ್​ ಕುಮಾರ್​ ಕಟೀಲ್​ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details