ಬೆಂಗಳೂರು: ಭ್ರಷ್ಟಾಚಾರ, ಗಲಭೆ, ಭಯೋತ್ಪಾದನೆಗೆ ಮತ್ತೊಂದು ಹೆಸರು ಕಾಂಗ್ರೆಸ್ ಪಕ್ಷ. ದೇಶಕ್ಕೆ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ಎನ್ನುವ ಎರಡು ದೊಡ್ಡ ಕೊಡುಗೆ ಕೊಟ್ಟಿರುವುದು ಕಾಂಗ್ರೆಸ್. ಹಾಗಾಗಿಯೇ ಇಂದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗಿದೆ. ಈಗ ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡಬೇಕಿದೆ. ಮುಂದಿನ ಚುನಾವಣೆಯಲ್ಲಿ ಅದನ್ನೂ ಮಾಡಿ ತೋರಿಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಜಿಲ್ಲೆ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯೋಚನೆ ಮಾಡಬೇಕು. ಸ್ವಾತಂತ್ರದ ನಂತರ ಕಾಂಗ್ರೆಸ್ ನಿಂದ ಯಾರೆಲ್ಲಾ ಪ್ರಧಾನಮಂತ್ರಿಯಾಗಿದ್ದಾರೋ ಅವರಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಒಬ್ಬರು ಮಾತ್ರ ಕಳಂಕರಹಿತರಾಗಿದ್ದಾರೆ. ನೆಹರುಯಿಂದ ಹಿಡಿದು ಮನಮೋಹನ್ ಸಿಂಗ್ವರೆಗೆ ಎಲ್ಲರೂ ಕಳಂಕಿತ ಪ್ರಧಾನಮಂತ್ರಿಗಳಾಗಿದ್ದರು. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು.