ಬೆಂಗಳೂರು: ಮೆಟ್ರೋ ರೈಲು ನಿಗಮವು ನಾಳೆ (ಶನಿವಾರ) ರಾತ್ರಿ 9.30 ಗಂಟೆಯಿಂದ ನಗರದ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆ ಸ್ಥಗಿತಗೊಳ್ಳಲಿದೆ.
ನಾಳೆ ರಾತ್ರಿ 09.30 ಗಂಟೆಯಿಂದ ರೈಲು ಸೇವೆ ಸ್ಥಗಿತವಾಗಲಿದ್ದು, ಈ ಅವಧಿಯಲ್ಲಿ ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಸಂಚಾರ ಲಭ್ಯವಿರಲಿದೆ. ಹಾಗೆಯೇ ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 8.40 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.10 ಗಂಟೆಗೆ ಹೊರಡಲಿದೆ.