ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲು ಸಂಚಾರ ಎರಡು ತಾಸು ಸ್ಥಗಿತವಾಗಲಿದೆ. ರೈಲು ನಿಗಮ ಜುಲೈ 2ರಂದು ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
Namma Metro: ಎಂ.ಜಿ.ರಸ್ತೆ- ಬೈಯಪ್ಪನಹಳ್ಳಿವರೆಗೆ ಭಾನುವಾರ ಮೆಟ್ರೋ ರೈಲು 2 ತಾಸು ಸ್ಥಗಿತ - ಮೆಟ್ರೋ ಸಂಚಾರ ಸ್ಥಗಿತ
ಭಾನುವಾರ ನೇರಳೆ ಮಾರ್ಗದಲ್ಲಿ ಕಾಮಗಾರಿ ಇರುವುದರಿಂದ ನಮ್ಮ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ನಮ್ಮ ಮೆಟ್ರೋ
ಕೆಂಗೇರಿ ಮತ್ತು ಎಂ.ಜಿ. ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೆ.ಆರ್. ಪುರಂ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 7 ಗಂಟೆಗೆ ವೇಳಾಪಟ್ಟಿಯ ಪ್ರಕಾರವೇ ಸಂಚರಿಸಲಿದೆ ಎಂದು ತಿಳಿಸಲಾಗಿದೆ.