ಬೆಂಗಳೂರು :ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣದ ಮಧ್ಯೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಎಂಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ವರೆಗೆ ವಾಣಿಜ್ಯ ಸೇವೆ ತಾತ್ಕಾಲಿಕ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಎಲ್ ಸೂಚನೆ ನೀಡಿದೆ.
ಪ್ರಯಾಣಿಕರ ಗಮನಕ್ಕೆ.. ಮೆಟ್ರೋ ಸಂಚಾರದಲ್ಲಿ ವ್ಯತ್ಯಯ.. 2 ದಿನಗಳ ಕಾಲ ನೇರಳೆ ಮಾರ್ಗ ಬಂದ್.. - ನಮ್ಮ ಮೆಟ್ರೋ ಸುದ್ದಿ
ಕಾಮಗಾರಿ ಪೂರ್ಣಗೊಂಡ ಬಳಿಕ ಎಂದಿನಂತೆ ಮೆಟ್ರೋ ಸಂಚಾರವಿರುತ್ತದೆ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆ ಹೊಡಿಸಿದೆ. ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ನಮ್ಮ ಮೆಟ್ರೋ ತಿಳಿಸಿದೆ..
ನಮ್ಮ ಮೆಟ್ರೋ
ನಾಳೆ ಸಂಜೆ 4 ಗಂಟೆಯಿಂದ ಭಾನುವಾರ ಬೆಳಗ್ಗೆ 6ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ವೇಳೆ ಪ್ರಯಾಣಿಕರಿಗೆ ನೇರಳೆ ಮಾರ್ಗ ಎಂಜಿರಸ್ತೆಯಿಂದ ಕೆಂಗೇರಿ ಮೆಟ್ರೋ ನಿಲ್ದಾಣಕ್ಕೆ ಸಂಚಾರ ಲಭ್ಯವಿರುತ್ತದೆ.
ಕಾಮಗಾರಿ ಪೂರ್ಣಗೊಂಡ ಬಳಿಕ ಎಂದಿನಂತೆ ಮೆಟ್ರೋ ಸಂಚಾರವಿರುತ್ತದೆ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆ ಹೊಡಿಸಿದೆ. ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ನಮ್ಮ ಮೆಟ್ರೋ ತಿಳಿಸಿದೆ.