ಬೆಂಗಳೂರು: ವಿದ್ಯುತ್ ಲೈನ್ ಕಾಮಗಾರಿ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಗಿದೆ. ಡಿ.12 ಹಾಗೂ 14ರಂದು ಮೆಟ್ರೋ ಎರಡು ದಿನಗಳ ಕಾಲ ಸ್ಥಗಿತಗೊಳ್ಳಲಿದೆ.
ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ವಿಜಯನಗರ ಮೆಟ್ರೋ ನಿಲ್ದಾಣದವರೆಗೆ ಸಂಚಾರ ಸ್ಥಗಿತವಾಗಲಿದೆ. ಆದರೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ವಿಜಯನಗರ ಮೆಟ್ರೋ ನಿಲ್ದಾಣದವರೆಗೆ ಎಂದಿನಂತೆ ಇರಲಿದೆ.