ಬೆಂಗಳೂರು: ರಾಜಧಾನಿಯಲ್ಲಿ ಬಹುದಿನಗಳ ನಂತರ ನಮ್ಮ ಮೆಟ್ರೋ ರೈಲು ಓಡಾಟ ಆರಂಭಿಸಿದೆ. ಕೊರೊನಾ ಮಹಾಮಾರಿಯ ಹೊಡೆತಕ್ಕೆ ಸಿಲುಕಿ ಕಳೆದ 58 ದಿನಗಳಿಂದ ಮೆಟ್ರೋ ಸೇವೆ ಸ್ಥಗಿತಗೊಂಡಿತ್ತು.
58 ದಿನಗಳ ನಂತರ ಮೆಟ್ರೋ ಪುನರಾರಂಭ: ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತ ಪ್ರಯಾಣಿಕರು
ನಮ್ಮ ಮೆಟ್ರೋ ಪ್ರಯಾಣಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಫೇಸ್ ಮಾಸ್ಕ್ ಕಡ್ಡಾಯವಾಗಿದ್ದು, ಮಾಸ್ಕ್ ಹಾಕದವರಿಗೆ ಮೆಟ್ರೋ ಪ್ರವೇಶ ನಿಷೇಧಿಸಲಾಗಿದೆ. ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಪ್ರತಿ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿರುವುದು ಕಂಡುಬಂತು.
ಇಂದು ಬೆಳಗ್ಗೆ 7 ಗಂಟೆಯಿಂದ ಹಸಿರು-ನೇರಳೆ ಮಾರ್ಗದಲ್ಲಿ ಮೆಟ್ರೋ ಓಡಾಟ ನಡೆಸಿದೆ. ಪ್ರತಿ ಪ್ರಯಾಣಿಕರನ್ನೂ ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಪಡಿಸಿದ ನಂತರ ನಿಲ್ದಾಣದೊಳಗೆ ಬಿಡಲಾಗುತ್ತಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಫೇಸ್ ಮಾಸ್ಕ್ ಕಡ್ಡಾಯವಾಗಿದ್ದು, ಮಾಸ್ಕ್ ಹಾಕದವರಿಗೆ ಮೆಟ್ರೋ ಪ್ರವೇಶ ನಿಷೇಧಿಸಲಾಗಿದೆ. ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಪ್ರತಿ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿರುವುದು ಕಂಡುಬಂತು.
ಎರಡು ಹಂತದಲ್ಲಿ ಮೆಟ್ರೋ ಸೇವೆ ಇರಲಿದ್ದು, ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯತನಕ ಮೆಟ್ರೋ ಸೇವೆ ಇರಲಿದೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಪ್ರತಿ 5 ನಿಮಿಷಗಳ ಅಂತರದಲ್ಲಿ ಮೆಟ್ರೋ ಓಡಾಡಲಿದೆ. ಇನ್ನು ಕೊರೊನಾ ಸೋಂಕು ಕಾರಣಕ್ಕೆ ಟಿಕೆಟ್ ಕಾಯಿನ್ ನಿಷೇಧಿಸಿದ್ದು, ಸ್ಮಾರ್ಟ್ ಕಾರ್ಡ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.