ಬೆಂಗಳೂರು:ದೇಶದ ಮೆಟ್ರೊ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟೆಲಿಕಾಮ್ ನಿಯಂತ್ರಣ ಪ್ರಾಧಿಕಾರದ ಸೂಚನೆ ಮೇರೆಗೆ 5ಜಿ ನೆಟ್ವರ್ಕ್ ಅಳವಡಿಕೆಯ ಪೈಲಟ್ ಪ್ರಾಜೆಕ್ಟ್ ಪರೀಕ್ಷೆ ಯಶಸ್ವಿಯಾಗಿದೆ ಎಂದು ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಹೇಳಿದ್ದಾರೆ.
ಈ ಒಂದು ನಿಲ್ದಾಣದಲ್ಲಿ ಯಶಸ್ವಿಯಾದರೆ ಶೀಘ್ರದಲ್ಲೇ ಮೆಟ್ರೊ ರೈಲ್ವೆ ನಿಲ್ದಾಣದಲ್ಲಿ 5 ಜಿ ಸೇವೆ ಲಭ್ಯವಾಗಲಿದೆ. ಈ ಪ್ರಾಯೋಗಿಕ ಪರೀಕ್ಷೆಯಲ್ಲಿ ಮೊಬೈಲ್ ನೆಟ್ವರ್ಕ್ ವೇಗದಲ್ಲಿ ಸಾಕಷ್ಟು ಪ್ರಗತಿ ಕಂಡಿದ್ದೇವೆ ಎಂದು ತಿಳಿಸಿದ್ದಾರೆ.
ಎಂ. ಜಿ ರಸ್ತೆಯ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ರಿಲಯನ್ಸ್ ಜಿಯೋ 5 ಜಿ ನೆಟ್ವರ್ಕ್ 200 ಮೀಟರ್ ವ್ಯಾಸದಲ್ಲಿ ಲಭ್ಯವಾಗಿರುವಂತೆ ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಈ ನೆಟ್ವರ್ಕ್ನಲ್ಲಿ 1.45 ಜಿ.ಬಿ.ಪಿ.ಎಸ್ ಡೌನ್ಲೋಡ್ ವೇಗ ಹಾಗೂ 65 ಎಂ.ಬಿ.ಪಿ.ಎಸ್ ಅಪ್ಲೋಡ್ ವೇಗ ದಾಖಲಾಗಿದೆ. 4ಜಿ ನೆಟ್ವರ್ಕ್ಗಿಂತ 50 ಪಟ್ಟು ವೇಗವನ್ನು ಹೊಂದಿರುವುದು ಕಂಡು ಬಂದಿದೆ ಎಂದು ಹೇಳಿದ್ದಾರೆ.