ಬೆಂಗಳೂರು:ಕೊರೊನಾ ಕಾರಣಕ್ಕೆ ಸ್ಥಗಿತವಾಗಿದ್ದ ನಮ್ಮ ಮೆಟ್ರೋ ಸೇವೆಯು ಕಳೆದ 7ರಂದು ನೇರಳೆ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಬಳಿಕ 9ರಂದು ಹಸಿರು ಮಾರ್ಗದಲ್ಲಿ ಸಂಚಾರ ಆರಂಭವಾಯಿತು. ಇದೀಗ ಇಂದಿನಿಂದ ಎರಡೂ ಮಾರ್ಗಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ರೈಲುಗಳು ಓಡಾಟ ನಡೆಸಲಿವೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೆ ಒಂದರಂತೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ನಮ್ಮ ಮೆಟ್ರೋ ಸಂಚಾರ ನಡೆಸಲಿದೆ.