ಕರ್ನಾಟಕ

karnataka

ETV Bharat / state

7 ಕೆಜಿ ಅಕ್ಕಿ ಕೊಟ್ಟರೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದೀರಿ: ಸಚಿವ ನಾರಾಯಣ ಗೌಡ

ನೀವೊಬ್ಬ ಮಾಜಿ ಮುಖ್ಯಮಂತ್ರಿಯಾಗಿ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ಪ್ರತಿ ಕುಟುಂಬಕ್ಕೆ 7 ಕೆಜಿ ನೀಡುತ್ತಿದ್ದ ಅಕ್ಕಿಯನ್ನು 5 ಕೆಜಿಗೆ ಇಳಿಸಿರುವುದಕ್ಕೆ “ಯಡಿಯೂರಪ್ಪ ಏನ್ ಅವರಪ್ಪನ ಮನೆಯಿಂದ ತಂದು ಕೊಡ್ತಾನ” ಎಂದು ಏಕವಚನದಲ್ಲೇ ಮಾತನಾಡಿರುವುದು ತಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ನಾರಾಯಣ ಗೌಡ ಕಿಡಿಕಾರಿದ್ದಾರೆ.

narayanagowda
ಸಚಿವ ನಾರಾಯಣ ಗೌಡ

By

Published : Apr 3, 2021, 7:56 PM IST

ಬೆಂಗಳೂರು: 7 ಕೆಜಿ ಅಕ್ಕಿ ಕೊಟ್ಟರೂ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಸೋತಿದ್ದಕ್ಕೆ ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ನಾರಾಯಣ ಗೌಡ ಅವರು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿದ್ದರಾಮಯ್ಯ ಅವರೇ, ನಮ್ಮ ಸರ್ಕಾರ ಬಂದ ಮೇಲೆ ಎಲ್ಲಾ ನೇಕಾರರಿಗೆ ರೂ. 2000, ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ರೈತರಿಗೆ ರೂ. 4000, ಭಾಗ್ಯ ಲಕ್ಷ್ಮಿ ಯೋಜನೆ ಮತ್ತು ಇತರೆ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿರುತ್ತೇವೆ. ಆದರೆ ನೀವೊಬ್ಬ ಮಾಜಿ ಮುಖ್ಯಮಂತ್ರಿಯಾಗಿ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ಪ್ರತಿ ಕುಟುಂಬಕ್ಕೆ 7 ಕೆಜಿ ನೀಡುತ್ತಿದ್ದ ಅಕ್ಕಿಯನ್ನು ನಮ್ಮ ಸರ್ಕಾರ 5 ಕೆಜಿಗೆ ಇಳಿಸಿರುವುದಕ್ಕೆ “ಯಡಿಯೂರಪ್ಪ ಏನ್ ಅವರಪ್ಪನ ಮನೆಯಿಂದ ತಂದು ಕೊಡ್ತಾನ” ಎಂದು ಏಕವಚನದಲ್ಲೇ ಮಾತನಾಡಿರುವುದು ತಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯಗೆ ಮಾತಿನ ಮೇಲೆ ಹಿಡಿತವಿರಲಿ, ಪರಿಸ್ಥಿತಿ ನೆಟ್ಟಗಿರುವುದಿಲ್ಲ: ಬೈರತಿ ಬಸವರಾಜ್ ಗುಟುರು

ಒಂದು ಜವಾಬ್ದಾರಿಯುತ ಸರ್ಕಾರವಾಗಿ ಜನರ ನಾಡಿಮಿಡಿತವನ್ನು ಅರಿತು, ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿರುತ್ತೇವೆ. ಆದರೆ ತಾವು ತಮ್ಮ ಜವಾಬ್ದಾರಿಯುತ ಸ್ಥಾನವನ್ನು ಮರೆತು ಏಕವಚನದಲ್ಲೇ ಬಾಯಿಗೆ ಬಂದಂತೆ ಮಾತನಾಡಿದಲ್ಲಿ ನಾವು ಕೂಡ ಏಕವಚನದಲ್ಲೇ ಉತ್ತರಿಸಬೇಕಾಗುತ್ತದೆ. ಆದ್ದರಿಂದ ತಮ್ಮ ಮಾತಿನ ಮೇಲೆ ಹಿಡಿತವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details