ಬೆಂಗಳೂರು :ಸುದ್ದಗುಂಟೆಪಾಳ್ಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಕೋಟಿ ಮೌಲ್ಯದ ಮಾದಕ ವಸ್ತುಗಳ ಜೊತೆ ಭಾರಿ ಮೊತ್ತದ ಹ್ಯಾಶ್ ಆಯಿಲ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಮ್ಮದ್ ಇರ್ಫಾನ್ (24) ಮತ್ತು ಥಾರಿ ಅಜೀಂ (26) ಬಂಧಿತ ಆರೋಪಿಗಳಾಗಿದ್ದಾರೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹ್ಯಾಶ್ ಆಯಿಲ್ ತರುತ್ತಿದ್ದರು. ಐಷಾರಾಮಿ ಜೀವನ ನಡೆಸಲು ಮಾದಕ ವಸ್ತಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.