ಬೆಂಗಳೂರು:ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಕ್ರಮ ಖಂಡಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಭಾರಿ ಬೆಂಬಲ ದೊರೆತಿದೆ.
ನ್ಯಾಷನಲ್ ಕಾಲೇಜು ಆವರಣ ಸಂಪೂರ್ಣ ಡಿಕೆಶಿ ಅಭಿಮಾನಿಗಳಿಂದ ತುಂಬಿ ತುಳುಕಿತ್ತು. ನಿಗದಿಯಂತೆ ಬೆಳಗ್ಗೆ 10 ಗಂಟೆಗೆ ಆಗಮಿಸಲು ಆರಂಭಿಸಿದ ಅಭಿಮಾನಿಗಳು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈ ಮೆರವಣಿಗೆಯ ಆರಂಭಿಕ ಭಾಗದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಜನಸ್ತೋಮವನ್ನು ಉದ್ದೇಶಿಸಿ ತಮ್ಮ ಭಾಷಣವನ್ನು ಮಾಡಿದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.