ಬೆಂಗಳೂರು: ಡ್ರಗ್ಸ್ ಸರಬರಾಜು ಪ್ರಕರಣದಲ್ಲಿ ಆರೋಪಿಗಳೊಂದಿಗೆ ನಂಟು ಹೊಂದಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೀಶ್ ಕೊಡಿಯೇರಿಯನ್ನು ಎನ್ಸಿಬಿ ನ.20 ರವರೆಗೆ ವಶಕ್ಕೆ ಪಡೆದುಕೊಂಡಿದೆ.
ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೀಶ್ ಕೊಡಿಯೇರಿ ನ.20 ರವರೆಗೆ ಎನ್ಸಿಬಿ ವಶಕ್ಕೆ - Bineesh Kodiyeri news
ಡ್ರಗ್ಸ್ ಸರಬರಾಜು ಪ್ರಕರಣದಲ್ಲಿ ಆರೋಪಿಗಳೊಂದಿಗೆ ನಂಟು ಹೊಂದಿದ ಆರೋಪದಡಿ ಹೆಚ್ಚಿನ ವಿಚಾರಣೆ ನಡೆಸಲು ಎನ್ಸಿಬಿ ಅಧಿಕಾರಿಗಳು ನ್ಯಾಯಾಲಯದಿಂದ ನ.20 ರವರೆಗೆ ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೀಶ್ ಕೊಡಿಯೇರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಡ್ರಗ್ಸ್ ಅವ್ಯವಹಾರ ಹಾಗೂ ಅಕ್ರಮ ಲೇವಾದೇವಿ ಆರೋಪದಡಿ ಜಾರಿ ನಿರ್ದೇಶಾಲಯ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದ ಆರೋಪಿ ಮೊಹಮ್ಮದ್ ಅನೂಪ್ನೊಂದಿಗೆ ನಿಕಟ ಸಂಪರ್ಕ ಹೊಂದಿರುವುದು ಗೊತ್ತಾಗಿತ್ತು. ಈತನ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಬೇನಾಮಿ ಆಸ್ತಿ ಗಳಿಕೆ ಹೊಂದಿರುವುದು ತಿಳಿದು ಬಂದಿತ್ತು. ಇದೇ ಆರೋಪದಡಿ ಹೆಚ್ಚಿನ ವಿಚಾರಣೆ ನಡೆಸಲು ಎನ್ಸಿಬಿ ಅಧಿಕಾರಿಗಳು ನ್ಯಾಯಾಲಯದಿಂದ ನ.20 ರವರೆಗೆ ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಯಾಂಡಲ್ವುಡ್ ನಟ ನಟಿಯರಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಗಳಿಗೆ ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ದ. ಡ್ರಗ್ಸ್ ಕೇಸ್ನಲ್ಲಿ ಈಗಾಗಲೇ ಅನುಪ್ ಮೊಹಮ್ಮದ್, ಅನಿಕಾ ಸೇರಿದಂತೆ ಒಟ್ಟು ಮೂವರು ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.