ಕರ್ನಾಟಕ

karnataka

ETV Bharat / state

ಗೋಹತ್ಯೆ ನಿಷೇಧ ಕಾನೂನು ಜಾರಿ ಅಗತ್ಯ; ಸಚಿವ ಡಾ. ಕೆ. ಸುಧಾಕರ್ - ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ

ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರುದ್ಧವಾದ ಕ್ರಮವಾಗಿದೆ. ಆದ್ದರಿಂದ ಗೋಹತ್ಯೆಗೆ ಅವಕಾಶ ನೀಡುವುದು ಸರಿಯಲ್ಲ. ದೇಶದಲ್ಲಿ ಗೋಹತ್ಯೆ ನಿಷೇಧ ಕ್ರಮ ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗುವ ಅಗತ್ಯವಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Minister Sudhakar
ಸಚಿವ ಡಾ.ಕೆ.ಸುಧಾಕರ್

By

Published : Nov 6, 2020, 6:32 PM IST

ಬೆಂಗಳೂರು:ದೇಶದಲ್ಲಿ ಗೋವು ಪವಿತ್ರ ಎಂದು ಪರಿಗಣನೆಯಾಗಿದ್ದು, ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಗೋವು ಒಂದು ಪವಿತ್ರವಾದ ಪ್ರಾಣಿ ಎಂದು ನಂಬುವ ದೇಶ ನಮ್ಮದು. ಗೋವನ್ನು ಕುಟುಂಬದ ಸದಸ್ಯರಂತೆ ನಾವು ಗೌರವಿಸುತ್ತೇವೆ. ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರುದ್ಧವಾದ ಕ್ರಮವಾಗಿದೆ. ಆದ್ದರಿಂದ ಗೋಹತ್ಯೆಗೆ ಅವಕಾಶ ನೀಡುವುದು ಸರಿಯಲ್ಲ. ದೇಶದಲ್ಲಿ ಗೋಹತ್ಯೆ ನಿಷೇಧ ಕ್ರಮ ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗುವ ಅಗತ್ಯವಿದೆ” ಎಂದರು.

ಸಭೆ : ಸಚಿವ ಡಾ.ಕೆ.ಸುಧಾಕರ್ ಅವರು ಇಂದು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ, ಇಂದ್ರಧನುಷ್ ಲಸಿಕೆ ಅಭಿಯಾನ ಮೊದಲಾದ ಯೋಜನೆಗಳ ಕುರಿತು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರೊಂದಿಗೆ ಸಭೆ ನಡೆಸಿದರು. ನಂತರ ಆಂಬ್ಯುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗ್ರಾಮೀಣ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ABOUT THE AUTHOR

...view details