ಬೆಂಗಳೂರು:ಪಾಸ್ ಪೋರ್ಟ್ಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಟ್ಟುಕೊಳ್ಳುವ ಯಾವುದೇ ರೀತಿಯ ಅಧಿಕಾರವಿಲ್ಲ ಎಂದು ಹೇಳಿದೆ. ಪ್ರಕರಣವೊಂದರ ವಿಚಾರಣೆ ವೇಳೆ ರಾಜ್ಯ ಉಚ್ಚ ನ್ಯಾಯಾಲಯವು ಈ ರೀತಿ ಹೇಳಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ತೀರ್ಪು ನೀಡಿದೆ.
ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಿರುವ ಪಾಸ್ಪೋರ್ಟ್ನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ಕೋರಿ, ಬೆಂಗಳೂರಿನ ಪ್ರವೀಣ್ ಸುರೇಂದಿರನ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಇಂದು ತೀರ್ಪು ಪ್ರಕಟಿಸಿದೆ. ಪೀಠ ತನ್ನ ತೀರ್ಪಿನಲ್ಲಿ, ಸಿಆರ್ಪಿಸಿ ಸೆಕ್ಷನ್ 102ರ ಅಡಿ ಪೊಲೀಸರಿಗೆ ದಾಖಲೆಗಳನ್ನು ಜಪ್ತಿ ಮಾಡುವ ಅಧಿಕಾರವಿದೆ ಎಂದಿದೆ.