ಬೆಂಗಳೂರು:ಅನಾರೋಗ್ಯ ಹಿನ್ನೆಲೆ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಶಶಿಕಲಾ ನಟರಾಜನ್ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ (Computed tomography) ಸೌಲಭ್ಯವಿಲ್ಲದ ಪರಿಣಾಮ ಹಾಗೂ ಭದ್ರತೆ ದೃಷ್ಟಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಈ ಸಂಬಂಧ ಶಶಿಕಲಾ ಅವರ ಸೋದರ ಸಂಬಂಧಿ ದಿನಕರನ್ ಮಾತನಾಡಿ, ಅಮ್ಮನಿಗೆ ಅನಾರೋಗ್ಯ ಹಿನ್ನೆಲೆ ಇಂದು ಆಸ್ಪತ್ರೆಗೆ ಬಂದಿದ್ದೇನೆ. ಶಶಿಕಲಾ ಅವರಿಗೆ ಉಸಿರಾಟ ತೊಂದರೆ, ಕಫಾ ಸೇರಿದಂತೆ ಇನ್ನಿತರ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜೈಲಾಧಿಕಾರಿಗಳು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆ ಒಳಹೋಗಿ ಶಶಿಕಲಾ ಅವರೊಂದಿಗೆ ಮಾತನಾಡಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.