ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ.
ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಮೌಲಾನಾ ಆಜಾದ್, ವಸತಿ ಶಾಲಾ-ಕಾಲೇಜುಗಳಿಗೆ ಇದು ಅನ್ವಯವಾಗಲಿದೆ.