ಕರ್ನಾಟಕ

karnataka

ETV Bharat / state

ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆಯಾಗಿ ಪ್ರಸನ್ನ ಬಿ ವರಾಲೆ

ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದರು. ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್‌.ಎನ್‌. ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ಪ್ರಾಕ್ಟಿಸ್‌ ಆರಂಭಿಸಿದ್ದರು.

Prasanna B Varale as the new CJ
ನೂತನ ಸಿಜೆಯಾಗಿ ಪ್ರಸನ್ನ ಬಿ ವರಾಲೆ

By

Published : Sep 30, 2022, 3:01 PM IST

ಬೆಂಗಳೂರು: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದರು. ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್‌.ಎನ್‌. ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ಪ್ರಾಕ್ಟಿಸ್‌ ಆರಂಭಿಸಿದ್ದರು.

1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್‌ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ಇದನ್ನೂ ಓದಿ:ನ್ಯಾಯಮೂರ್ತಿ ಎನ್.​ವಿ. ರಮಣ ನೀಡಿರುವ ಮಹತ್ವದ ತೀರ್ಪುಗಳು

ABOUT THE AUTHOR

...view details