ಬೆಂಗಳೂರು: ಪೊಲೀಸರ ಸಮಯ ಪ್ರಜ್ಞೆಯಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನವ ದಂಪತಿ ಸಾವಿನಿಂದ ಪಾರಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಕತ್ತು ಕೊಯ್ದುಕೊಂಡು ನವ ದಂಪತಿ ಆತ್ಮಹತ್ಯೆಗೆ ಯತ್ನ.. ಆಗ ಪೊಲೀಸರು ಬಂದೇ ಬಿಟ್ಟರು.. - ಬೆಂಗಳೂರು ನವ ದಂಪತಿಗಳು ಆತ್ಮಹತ್ಯೆಗೆ ಯತ್ನ
ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ 3 ತಿಂಗಳ ಹಿಂದೆಯಷ್ಟೇ ಮದುವೆಯಾಗಿ ನಗರದಲ್ಲಿ ವಾಸ ಮಾಡ್ತಿದ್ರು. ಇಬ್ಬರ ಕುಟುಂಬದ ನಡುವೆ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆಯಿದ್ದು, ತನಿಖೆ ಮುಂದುವರೆದಿದೆ.
ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ತಡರಾತ್ರಿ ಬಾಲಾಜಿ ಹಾಗೂ ಸೌಮ್ಯ ಎಂಬ ನವ ದಂಪತಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಚಾರ ತಿಳಿದ ಸ್ಥಳೀಯರು ಗಿರಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಗಸ್ತಿನಲ್ಲಿದ್ದ ಗಿರಿನಗರ ಸಬ್ ಇನ್ಸ್‌ಪೆಕ್ಟರ್ ವಿನಯ್ ಮತ್ತು ಸಿಬ್ಬಂದಿ ದಂಪತಿಯನ್ನ ಕೊಡಲೇ ಆಸ್ಪತ್ರೆಗೆ ಸೇರಿಸಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ 3 ತಿಂಗಳ ಹಿಂದೆಯಷ್ಟೇ ಮದುವೆಯಾಗಿ ನಗರದಲ್ಲಿ ವಾಸ ಮಾಡ್ತಿದ್ರು. ಇಬ್ಬರ ಕುಟುಂಬದ ನಡುವೆ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆಯಿದ್ದು, ತನಿಖೆ ಮುಂದುವರೆದಿದೆ. ದಂಪತಿಯನ್ನ ಪ್ರಾಣಾಪಾಯದಿಂದ ಪಾರು ಮಾಡಿದ ಸಬ್ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಯ ಸಮಯ ಪ್ರಜ್ಞೆಗೆ ಸಾರ್ವಜನಿಕರು ಹಾಗೂ ಹಿರಿಯ ಅಧಿಕಾರಿಗಳು ಮೆಚ್ವುಗೆ ವ್ಯಕ್ತ ಪಡಿಸಿದ್ದಾರೆ.