ಬೆಂಗಳೂರು:ರಾಜ್ಯದಲ್ಲಿ ನಿಧಾನವಾಗಿ ಕೋವಿಡ್ ಪ್ರಕರಣಗಳು ಏರಿಕೆ ಆಗುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆಯು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದಕ್ಷಿಣ ಕೊರಿಯಾ, ಜಪಾನ್, ಥೈಲ್ಯಾಂಡ್, ಆಸ್ಟ್ರೇಲಿಯಾ, ವಿಯೆಟ್ನಾಂ, ನ್ಯೂಜಿಲೆಂಡ್ನಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚಳವಾಗುತ್ತಿರುವುದು ವರದಿಯಾಗಿದೆ.
ಕೋವಿಡ್ ಕೇಸ್ ಏರಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಗೈಡ್ಲೈನ್ಸ್ ಬಿಡುಗಡೆ - ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೊರೊನಾ ಮಾರ್ಗಸೂಚಿ
COVID guidelines for International travelers.. ಕೋವಿಡ್ ಪ್ರಕರಣಗಳು ಏರಿಕೆ ಆಗುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆಯು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಗೈಡ್ಲೈನ್ಸ್ ಬಿಡುಗಡೆ
ಪ್ರಮುಖವಾಗಿ ಬೆಂಗಳೂರಿಗೆ ನೇರ ವಿಮಾನ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಜಪಾನ್ ಹಾಗೂ ಥೈಲ್ಯಾಂಡ್ನಿಂದ ಬರುವ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಗೈಡ್ಲೈನ್ಸ್ ಪಾಲನೆ ಕಡ್ಡಾಯವಾಗಿದೆ.
- ಹೊಸ ರೂಲ್ಸ್ ಏನು?
- ಜಪಾನ್, ಥೈಲ್ಯಾಂಡ್ನಿಂದ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
- ಕೋವಿಡ್ ಲಕ್ಷಣಗಳಿರುವ ಪ್ರಯಾಣಿಕರ ಸ್ಯಾಂಪಲ್ ವಿಮಾನ ನಿಲ್ದಾಣದ ಲ್ಯಾಬ್ನಲ್ಲೇ ಪರೀಕ್ಷೆ ಮಾಡುವುದು. ಪಾಸಿಟಿವ್ ಬಂದರೆ ಜೀನೋಮ್ ಸೀಕ್ವೆನ್ಸಿಂಗ್ ಕಳಿಸುವುದು
- ಜಪಾನ್, ಥೈಲ್ಯಾಂಡ್ನಿಂದ ಬರುವ ಪ್ರಯಾಣಿಕರಿಗೆ 14 ದಿನಗಳ ಕಾಲ ಟೆಲಿ ಮಾನಿಟರಿಂಗ್ ಮಾಡುವುದು ಕಡ್ಡಾಯ
ಇದನ್ನೂ ಓದಿ:ಭಾರತದಲ್ಲಿ 3,688 ಹೊಸ ಕೋವಿಡ್ ಪ್ರಕರಣ ಪತ್ತೆ, 50 ಸಾವು: ಏರಿಕೆಯತ್ತ ಸೋಂಕಿತರ ಸಂಖ್ಯೆ