ಕರ್ನಾಟಕ

karnataka

ETV Bharat / state

ನೂತನ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ..! - karnataka politics

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಆಗಸ್ಟ್ 9 ಅಥವಾ 11 ರಂದು ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಆಗಸ್ಟ್ 5 ಅಥವಾ 7 ರಂದು ಸಿಎಂ ಯಡಿಯೂರಪ್ಪ ಮತ್ತಿತರ ನಾಯಕರು ದೆಹಲಿಗೆ ತೆರಳಲಿದ್ದು, ವರಿಷ್ಠರೊಂದಿಗೆ ಚರ್ಚಿಸಿದ ನಂತರ ಮೊದಲ ಕಂತಿನ ಸಂಪುಟ ವಿಸ್ತರಣೆ ನಡೆಯಲಿದೆ.

ನೂತನ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ

By

Published : Aug 1, 2019, 10:03 AM IST

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಆಗಸ್ಟ್ 9 ಅಥವಾ 11 ರಂದು ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಅಗಸ್ಟ್ 5 ಅಥವಾ 7 ರಂದು ಸಿಎಂ ಯಡಿಯೂರಪ್ಪ ಮತ್ತಿತರ ನಾಯಕರು ದೆಹಲಿಗೆ ತೆರಳಲಿದ್ದು, ವರಿಷ್ಠ ರೊಂದಿಗೆ ಚರ್ಚಿಸಿದ ನಂತರ ಮೊದಲ ಕಂತಿನ ಸಂಪುಟ ವಿಸ್ತರಣೆ ನಡೆಯಲಿದೆ.

ಮೊದಲ ಕಂತಿನಲ್ಲಿ ಹತ್ತು ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ನೂತನ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ

ಮೈತ್ರಿ ಶಾಸಕರಿಗೆ ಬಿಎಸ್​ವೈ ಮಣೆ:ಒಂದು ವೇಳೆ ಅನರ್ಹಗೊಂಡಿರುವ ಶಾಸಕರು ಸುಪ್ರೀಂ ಕೋರ್ಟ್​ ಅವರ ಪರ ತೀರ್ಪು ನೀಡಿ ಬಿಜೆಪಿಗೆ ಬರಲು ಬಯಸಿದರೆ ಅವರಿಗೂ ಸಚಿವ ಸ್ಥಾನ ಕೊಡಲು ತೀರ್ಮಾನಿಸಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದವರನ್ನು ಸೇರಿಸಿಕೊಳ್ಳಬೇಕು ಎಂದು ಯಡಿಯೂರಪ್ಪ ಅವರು ಪಟ್ಟು ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ಹೋಗುವ ಪೂರ್ವ ನಿಯೋಜಿತ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ.

ದೆಹಲಿ ವರಿಷ್ಠರಿಗೂ ಈ ಕುರಿತು ಅಧಿಕೃತವಾಗಿ ಸಂದೇಶ ರವಾನಿಸಿದ ಯಡಿಯೂರಪ್ಪ, ರಾಜೀನಾಮೆ ನೀಡಿ ಅನರ್ಹತೆಯ ಶಿಕ್ಷೆಗೊಳಗಾಗಿರುವ ಶಾಸಕರನ್ನು ಕೈ ಬಿಟ್ಟು ಮಂತ್ರಿ ಮಂಡಲ ವಿಸ್ತರಣೆ ಮಾಡಿದರೆ ನಾವೂ ವಚನಭ್ರಷ್ಟತೆಯ ಆರೋಪ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಅನರ್ಹಗೊಂಡಿರುವ ಶಾಸಕರ ಬಗ್ಗೆ ಯಾರು ಏನೇ ಹೇಳಿದರೂ ಅವರನ್ನು ಕೈ ಬಿಟ್ಟು ಸಚಿವ ಸಂಪುಟ ವಿಸ್ತರಿಸಿದರೆ ಬಿಜೆಪಿಯನ್ನು ಯಾರೂ ನಂಬುವುದಿಲ್ಲ. ಇದು ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲ, ರಾಷ್ಟ್ರ ರಾಜಕಾರಣಕ್ಕೂ ಅನ್ವಯವಾಗುತ್ತದೆ ಎಂಬುದು ಯಡಿಯೂರಪ್ಪ ಅವರ ವಾದ.

ಈ ಹಿನ್ನೆಲೆಯಲ್ಲಿಯೇ ಆಗಸ್ಟ್ 2 ರ ಶುಕ್ರವಾರ ಇಲ್ಲವೇ 5 ರ ಸೋಮವಾರ ಸಚಿವ ಸಂಪುಟ ವಿಸ್ತರಿಸಲು ಹಾಕಿದ್ದ ಲೆಕ್ಕಾಚಾರವನ್ನು ಮುಂದೂಡಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ಅಗಸ್ಟ್ 7 ರಂದು ಸಂಸತ್ ಅಧಿವೇಶನ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ನಂತರ ದೆಹಲಿಗೆ ಬನ್ನಿ ಎಂದು ಸೂಚಿಸಿದೆ ಎಂದು ಹೇಳಲಾಗುತ್ತಿದೆ. ವರಿಷ್ಠರ ಸೂಚನೆಯ ಹಿನ್ನೆಲೆಯಲ್ಲಿ ಅಗಸ್ಟ್ 7 ರಂದು ದೆಹಲಿಗೆ ತೆರಳಲಿರುವ ಯಡಿಯೂರಪ್ಪ, ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ತ್ವರಿತವಾಗಿ ಇತ್ಯರ್ಥವಾಗಲಿದೆ ಎಂದು ನಂಬಿದ್ದಾರೆ.
ನಿನ್ನೆ ತಮ್ಮ ನಿವಾಸದಲ್ಲಿ ಅತೃಪ್ತ ಶಾಸಕರನ್ನು ಕರೆಸಿ ಯಾವ ಕಾರಣಕ್ಕೂ ನಿಮ್ಮ ಕೈ ಬಿಡುವ ಪ್ರಶ್ನೆ ಇಲ್ಲ. ನೆಮ್ಮದಿಯಾಗಿರಿ ಎಂದು ಭರವಸೆ ನೀಡಿದ್ದಾರೆ .ಆದರೆ ಶಾಸಕರನ್ನುಅನರ್ಹಗೊಳಿಸಿದ ಸ್ಪೀಕರ್ ಕ್ರಮದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ತ್ವರಿತವಾಗಿ ಯಾವುದೇ ನಿರ್ಧಾರ ಕೈಗೊಳ್ಳದೆ ಹೋದರೆ ಕೇವಲ ಹತ್ತು ಮಂದಿಯನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಂಘ ಪರಿವಾರದ ನಾಯಕರು ವರಿಷ್ಠರಿಗೆ ಹೇಳಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details