ಬೆಂಗಳೂರು:ರಮ್ಜಾನ್ ಹಬ್ಬದ ಸಂದರ್ಭದಲ್ಲಿ ಮುಸಲ್ಮಾನ್ ಸಮುದಾಯದವರು ಕೊವಿಡ್ ನಿಮಯಗಳ ಪಾಲನೆಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಕಂಟೇನ್ಮೆಂಟ್ ವಲಯದಲ್ಲಿರುವ ಮಸೀದಿಗಳನ್ನು ಯಾವುದೇ ಕಾರಣಕ್ಕೂ ತೆರೆಯುವಂತಿಲ್ಲ. ಕಂಟೇನ್ಮೆಂಟ್ ವಲಯದ ಹೊರಗಿನ ಮಸೀದಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು ಹಾಗೂ 10 ವರ್ಷದ ಒಳಗಿನ ವಯೋಮಾನದ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸುವಂತೆ ನಿಯಮಾವಳಿಯಲ್ಲಿ ತಿಳಿಸಲಾಗಿದೆ.
ಹೀಗಿವೆ ನಿಯಮ
1. ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದು, ಶುಭಾಶಯ ವಿನಿಮಯ ಮಾಡಿಕೊಳ್ಳುವುದಕ್ಕೆ ನಿಷೇಧ ಹೇರಲಾಗಿದೆ.
2. ಪ್ರತಿಯೊಬ್ಬರ ನಡುವೆ ಕನಿಷ್ಠ 2 ಮೀಟರ್ ಅಂತರವಿರಬೇಕು. ಪ್ರಾರ್ಥನೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನಿರ್ದಿಷ್ಟ ಗುರುತು ಮಾಡಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.